ಅರಣ್ಯಕಾಂಡ 14:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನನ್ನ ದಾಸನಾದ ಕಾಲೇಬನು ಅಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದದ್ದರಿಂದ ಅವನನ್ನೇ ಅವನು ಸಂಚರಿಸಿದ ಆ ದೇಶದಲ್ಲಿ ಸೇರಿಸುವೆನು; ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ಆ ದೇಶವನ್ನು ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿ |