Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀವು ಅವರಿಗೆ ಹೀಗೆ ಹೇಳಬೇಕು: ‘ಸರ್ವೇಶ್ವರ ಹೇಳುವುದೇನೆಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಆಡಿಕೊಂಡ ಪ್ರಕಾರವೇ ನಾನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನು ಹೇಳುವದೇನಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ‘ಯೆಹೋವನು ಹೇಳುವುದೇನೆಂದರೆ: ನನ್ನ ಜೀವದಾಣೆ. ನೀವು ಏನನ್ನು ಹೇಳಿದಿರೋ ಅದನ್ನೇ ನಿಮಗೆ ಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:28
18 ತಿಳಿವುಗಳ ಹೋಲಿಕೆ  

ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.


ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.


ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.


ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು


ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.


‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ


ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.


ಯೆಹೋವನು ನಿಮ್ಮ ಮಾತುಗಳನ್ನು ಕೇಳಿ ಕೋಪಗೊಂಡನು.


ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.


ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.


ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.


ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.


ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು