ಅರಣ್ಯಕಾಂಡ 14:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಾಲ್ವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ, ನಾಲ್ವತ್ತು ವರುಷ ನಿಮ್ಮ ಪಾಪದ ಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.