ಅರಣ್ಯಕಾಂಡ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶೀಯರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ಹೇಗೆ ಇರುವಿರೋ ಹಾಗೆಯೇ ಅನ್ಯದೇಶೀಯನೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ ಅನ್ಯದೇಶದವನೂ ಹಾಗೆಯೇ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು. ಅಧ್ಯಾಯವನ್ನು ನೋಡಿ |
ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.