Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮಗೂ ನಿಮ್ಮಲ್ಲಿ ವಾಸಿಸುವ ವಿದೇಶೀಯನಿಗೂ ಒಂದೇ ವಿಧಿ, ಒಂದೇ ನಿಯಮ ಇರಬೇಕು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮಗೂ ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ಪ್ರಮಾಣವಿಧಿಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:16
8 ತಿಳಿವುಗಳ ಹೋಲಿಕೆ  

ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಎಂದನು.


ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.


“ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.”


ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,


ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.


ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.


“ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು