ಅರಣ್ಯಕಾಂಡ 15:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.