ಅರಣ್ಯಕಾಂಡ 15:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯಾಜಕನು ಇಸ್ರಾಯೇಲ್ಯರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದನ್ನು ಪರಿಹರಿಸುವದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನೂ ದೋಷಪರಿಹಾರಕಯಜ್ಞವನ್ನೂ ಮಾಡಿಸಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು. ಅಧ್ಯಾಯವನ್ನು ನೋಡಿ |