Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯಾವನಾದರೂ ಒಬ್ಬನು ವೈಯಕ್ತಿಕವಾಗಿ ತಿಳಿಯದೆ ತಪ್ಪು ಮಾಡಿದರೆ ಅಂಥವನು ದೋಷಪರಿಹಾರಕ ಬಲಿಗಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾವನಾದರೂ ಒಬ್ಬನು ಮಾತ್ರ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕಯಜ್ಞಕ್ಕಾಗಿ ಒಂದು ವರುಷದ ಆಡನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಆದರೆ ಒಬ್ಬನು ತಿಳಿಯದೆ ಪಾಪಮಾಡಿದರೆ, ಅವನು ಒಂದು ವರ್ಷದ ಹೆಣ್ಣು ಆಡನ್ನು ದೋಷ ಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ ‘ಯಾವನಾದರೂ ಒಬ್ಬನು ತಿಳಿಯದೆ ಪಾಪ ಮಾಡುವುದಾದರೆ, ಪಾಪ ಪರಿಹಾರಕ ಬಲಿಗಾಗಿ ಒಂದು ವರ್ಷದ ಮೇಕೆಯನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:27
7 ತಿಳಿವುಗಳ ಹೋಲಿಕೆ  

ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.


“ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.


ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.


ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು