ಅರಣ್ಯಕಾಂಡ 16:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನೂ ಆದ ಕೋರಹನೂ - ಅವನಲ್ಲದೆ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಅಬೀರಾಮರೂ ಪೆಲೆತನ ಮಗನಾದ ಓನನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಕೋರಹ, ದಾತಾನ್, ಅಬೀರಾಮ್ ಮತ್ತು ಓನ್ ಎಂಬವರು ಮೋಶೆಗೆ ವಿರುದ್ಧವಾಗಿ ಎದ್ದರು. (ಕೋರಹನು ಇಚ್ಹಾರನ ಮಗನು, ಇಚ್ಹಾರನು ಕೆಹಾತನ ಮಗನು. ಕೆಹಾತನು ಲೇವಿಯ ಮಗನು. ದಾತಾನ್ ಮತ್ತು ಅಬೀರಾಮ್ ಇವರು ಎಲೀಯಾಬನ ಗಂಡುಮಕ್ಕಳು ಮತ್ತು ಓನನು ಪೆಲೆತನ ಮಗನು. ದಾತಾನ್, ಅಬೀರಾಮ್ ಮತ್ತು ಓನ್ ಇವರು ರೂಬೇನನ ಸಂತತಿಯವರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಲೇವಿಯ ಮಗನಾದ ಕೊಹಾತನ ಮೊಮ್ಮಗ ಇಚ್ಹಾರನ ಮಗ ಕೋರಹನೂ ರೂಬೇನ್ ಗೋತ್ರದವರಾದ ಎಲೀಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಜನರನ್ನು ತೆಗೆದುಕೊಂಡು ಅಧ್ಯಾಯವನ್ನು ನೋಡಿ |