Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದು ಕೋರಹನಾದ ನಿನಗೂ ನಿನ್ನ ಸ್ವಕುಲದವರಾದ ಲೇವಿಯರಿಗೂ ಕೇವಲ ಅಲ್ಪಕಾರ್ಯವೆಂದು ತೋರಿತೇ? ಯಾಜಕ ಪದವಿ ನಿಮಗಾಗಬೇಕೆಂದು ಕೋರುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಇಟ್ಟುಕೊಂಡದ್ದು ಅಲ್ಪಕಾರ್ಯವೆಂದು ನಿಮಗೆ ಕಾಣುತ್ತದೋ? ಯಾಜಕತ್ವವೂ ನಿಮಗೆ ಆಗಬೇಕೆಂದು ಕೋರುತ್ತೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ರೀತಿ ಆತನ ಬಳಿಯಲ್ಲಿ ಸೇವೆಮಾಡಲು ನಿನಗೂ ನಿನ್ನ ಸಹೋದ್ಯೋಗಿಗಳಾದ ಎಲ್ಲಾ ಲೇವಿಯರಿಗೂ ಯೆಹೋವನು ಅವಕಾಶ ಕೊಟ್ಟಿದ್ದಾನೆ. ಆದರೆ ಈಗ ನೀವು ಯಾಜಕರಾಗಬೇಕೆಂದು ಸಹ ಪ್ರಯತ್ನಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ನಿನ್ನನ್ನೂ, ನಿನ್ನ ಸಂಗಡ ಲೇವಿಯ ಪುತ್ರರಾದ ನಿನ್ನ ಸಹೋದರರೆಲ್ಲರನ್ನೂ ತಮ್ಮ ಹತ್ತಿರ ಬರಮಾಡಿಕೊಂಡಿದ್ದಾರೆ. ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:10
11 ತಿಳಿವುಗಳ ಹೋಲಿಕೆ  

ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.


ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.


ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.


ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.


ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.


ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು,


“ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು