Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆರೋನನಂಥವನಿಗೇ ವಿರೋಧವಾಗಿ ಗೊಣಗುವವರಾದ್ದರಿಂದ ನೀನು ಮತ್ತು ನಿನ್ನ ಪಂಗಡದವರೆಲ್ಲರು ಸರ್ವೇಶ್ವರನಿಗೆ ವಿರುದ್ಧ ಕೂಡಿಕೊಂಡವರಾದಿರಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನೂ ನಿನ್ನ ಸಮೂಹದವರೆಲ್ಲರೂ ಯೆಹೋವನಿಗೆ ವಿರೋಧವಾಗಿ ಕೂಡಿಕೊಂಡವರು; ಆರೋನನಿಗೆ ವಿರೋಧವಾಗಿ ಗುಣಗುಟ್ಟುವದೇನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಮತ್ತು ನಿನ್ನ ಹಿಂಬಾಲಕರು ಒಟ್ಟಾಗಿ ಸೇರಿಕೊಂಡು ಯೆಹೋವನಿಗೆ ವಿರೋಧವಾಗಿ ದಂಗೆ ಎದ್ದಿದ್ದೀರಿ. ಆರೋನನು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಆರಿಸಿಕೊಂಡನೋ? ಇಲ್ಲ! ಹೀಗಿರಲು ಆರೋನನಿಗೆ ವಿರೋಧವಾಗಿ ಗುಣುಗುಟ್ಟುವುದೇಕೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:11
15 ತಿಳಿವುಗಳ ಹೋಲಿಕೆ  

ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.


ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.


ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.


ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕರ ವರ್ಗಗಳು ಇವೇ.


ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು