Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ಬರುವದಿಲ್ಲ, ನೀನು ಹಾಲೂ ಜೇನೂಹರಿಯವ ದೇಶದಿಂದ ನಮ್ಮನ್ನು ಕರಕೊಂಡು ಬಂದು ಮರಳುಕಾಡಿನಲ್ಲಿ ಸಾಯಿಸುವದು ಅಲ್ಪಕಾರ್ಯವೆಂದು ಎಣಿಸಿ ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:13
19 ತಿಳಿವುಗಳ ಹೋಲಿಕೆ  

“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.


ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.


ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.


ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.


ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು


ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.


ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.


ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?


ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.


ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.


(ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?


ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು