ಅರಣ್ಯಕಾಂಡ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಷ್ಟು ಮಾತ್ರವೇ ಅಲ್ಲ, ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲವಲ್ಲಾ; ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವದಿಲ್ಲ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೊಲಗಳನ್ನಾಗಲಿ ದ್ರಾಕ್ಷೇತೋಟಗಳನ್ನಾಗಲಿ ಕೊಡಲಿಲ್ಲ! ನೀನು ಈ ಜನರಿಗೆ ಇದೇ ರೀತಿ ಮೋಸಮಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು. ಅಧ್ಯಾಯವನ್ನು ನೋಡಿ |