Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:15
18 ತಿಳಿವುಗಳ ಹೋಲಿಕೆ  

ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.


ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.


ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.


ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು