Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೋಶೆ ಕೋರಹನಿಗೆ, “ನೀನೂ ನಿನ್ನ ಪಂಗಡದವರು ಮತ್ತು ಆರೋನನು ನಾಳೆ ಸರ್ವೇಶ್ವರನ ಸನ್ನಿಧಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೋಶೆ ಕೋರಹನಿಗೆ - ನಾಳೆ ನೀನೂ ನಿನ್ನ ಸಮೂಹದವರೆಲ್ಲರೂ ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಮೋಶೆಯು ಕೋರಹನಿಗೆ, “ನೀನು ಮತ್ತು ನಿನ್ನ ಹಿಂಬಾಲಕರೆಲ್ಲರು ನಾಳೆ ಯೆಹೋವನ ಸನ್ನಿಧಿಯಲ್ಲಿ ಆರೋನನೊಡನೆ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೋಶೆಯು ಕೋರಹನಿಗೆ, “ನೀನೂ, ನಿನ್ನ ಸಮೂಹವೆಲ್ಲವೂ ಯೆಹೋವ ದೇವರ ಎದುರಿನಲ್ಲಿ ಇರಬೇಕು. ನೀನೂ, ಅವರೂ, ಆರೋನನೂ ನಾಳೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:16
8 ತಿಳಿವುಗಳ ಹೋಲಿಕೆ  

ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.


ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.


ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.


ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು