ಅರಣ್ಯಕಾಂಡ 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪಂಗಡದ ಪ್ರತಿಯೊಬ್ಬನು ತನ್ನ ತನ್ನ ಧೂಪಾರತಿಯನ್ನು ಅಂದರೆ ಒಟ್ಟು 250 ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಸರ್ವೇಶ್ವರನ ಸನ್ನಿಧಿಗೆ ಬರಬೇಕು. ನೀನು ಮತ್ತು ಆರೋನನು ಕೂಡ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಯನ್ನು, ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು; ಹಾಗೆಯೇ ನೀನೂ ಆರೋನನೂ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಧೂಪಾರತಿಯನ್ನು ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನೂ ಆರೋನನೂ ನಿಮ್ಮನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಒಬ್ಬೊಬ್ಬನು ತನ್ನ ತನ್ನ ಧೂಪ ಪಾತ್ರೆಯನ್ನು ತೆಗೆದುಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ, ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ಧೂಪ ಪಾತ್ರೆಗಳಾದ ನಿಮ್ಮ ಧೂಪ ಪಾತ್ರೆಗಳನ್ನು ಯೆಹೋವ ದೇವರ ಎದುರಿಗೆ ತನ್ನಿರಿ. ನೀನೂ, ಆರೋನನೂ, ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತೆಗೆದುಕೊಂಡು ಬನ್ನಿರಿ,” ಎಂದನು. ಅಧ್ಯಾಯವನ್ನು ನೋಡಿ |