Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವರ ಸಮೇತ ಸಮುದಾಯದವರಲ್ಲಿ ಮುಖ್ಯಸ್ಥರೂ ಸಲಹೆಗಾರರೂ ಹೆಸರಾಂತ ವ್ಯಕ್ತಿಗಳೂ ಆಗಿದ್ದ 250 ಮಂದಿ ಇಸ್ರಯೇಲರು ಕೂಡ ದಂಗೆಯೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಸಮೂಹದವರಲ್ಲಿ ಮುಖ್ಯಸ್ಥರಾಗಿಯೂ ಆಲೋಚನಾಕರ್ತರಾಗಿಯೂ ಹೆಸರುಗೊಂಡವರಾಗಿಯೂ ಇದ್ದ ಇನ್ನೂರೈವತ್ತುಮಂದಿ ಇಸ್ರಾಯೇಲ್ಯರೂ ಮೋಶೆಗೆ ವಿರೋಧವಾಗಿ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ನಾಲ್ಕು ಮಂದಿ ಇಸ್ರೇಲರು ಇನ್ನಿತರ ಇನ್ನೂರೈವತ್ತು ಗಂಡಸರೊಂದಿಗೆ ಮೋಶೆಗೆ ವಿರುದ್ಧವಾಗಿ ಎದ್ದರು. ಅವರು ಜನರಿಂದ ಆರಿಸಲ್ಪಟ್ಟ ನಾಯಕರಾಗಿದ್ದುದರಿಂದ ಜನರೆಲ್ಲರೂ ಅವರನ್ನು ಬಲ್ಲವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲರೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯ ಪ್ರಸಿದ್ಧರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಗೆ ಎದುರಾಗಿ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:2
10 ತಿಳಿವುಗಳ ಹೋಲಿಕೆ  

ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.


ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.”


ಇವರ ಗೋತ್ರಗಳ ಪ್ರಧಾನ ಪುರುಷರು ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್. ಇವರು ರಣವೀರರೂ ಪ್ರಖ್ಯಾತಿ ಹೊಂದಿದವರು ಗೋತ್ರಪ್ರಧಾನರೂ ಆಗಿದ್ದರು.


ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.


ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು” ಇದು ಕರ್ತನಾದ ಯೆಹೋವನ ನುಡಿ.


ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು,


ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.


ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.


ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.


“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು