ಅರಣ್ಯಕಾಂಡ 16:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು [ಇಸ್ರಾಯೇಲ್ಯರ] ಸಮೂಹದವರಿಗೆ - ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಮೋಶೆಯು ಜನರನ್ನು ಎಚ್ಚರಿಸಿ, “ಈ ಕೆಟ್ಟ ಜನರ ಗುಡಾರಗಳಿಂದ ಹೊರಟುಹೋಗಿರಿ. ಇವರ ಸ್ವತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು. ಇಲ್ಲವಾದರೆ ಅವರ ಪಾಪಗಳ ದೆಸೆಯಿಂದ ನೀವೂ ನಾಶವಾಗುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು. ಅಧ್ಯಾಯವನ್ನು ನೋಡಿ |