Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದು ಹೇಗೆಂದರೆ - ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಅಥವಾ ಎಲ್ಲರಿಗೂ ಸಂಭವಿಸುವ ಗತಿ ಇವರಿಗೆ ಒದಗಿದರೆ ಸರ್ವೇಶ್ವರ ನನ್ನನ್ನು ಕಳಿಸಲಿಲ್ಲವೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇಲ್ಲಿರುವ ಜನರು ಸಾಯುವರು. ಆದರೆ ಇವರ ಅಂತ್ಯವು ಎಲ್ಲರಿಗೂ ಸಂಭವಿಸುವ ಅಂತ್ಯವಾಗಿದ್ದರೆ, ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ, ಇಲ್ಲವೆ ಎಲ್ಲಾ ಮನುಷ್ಯರ ಶಿಕ್ಷೆ ಇವರಿಗೂ ಪ್ರಾಪ್ತವಾದರೆ ಯೆಹೋವ ದೇವರು ನನ್ನನ್ನು ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:29
11 ತಿಳಿವುಗಳ ಹೋಲಿಕೆ  

ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.


ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು,


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು