ಅರಣ್ಯಕಾಂಡ 16:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಬದಲಿಗೆ ಸರ್ವೇಶ್ವರ ಇವರಿಗಾಗಿ ಆಶ್ಚರ್ಯಕರವಾದ ಶಿಕ್ಷೆಯನ್ನು ಕಲ್ಪಿಸಿ ಅಂದರೆ ಭೂಮಿ ಬಾಯ್ದೆರೆದು ಇವರನ್ನು ಹಾಗೂ ಇವರಿಗಿರುವ ಸರ್ವಸ್ವವನ್ನು ನುಂಗಿಬಿಟ್ಟರೆ, ಇವರೆಲ್ಲರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಸರ್ವೇಶ್ವರನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವವಾದ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂವಿುಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವದರಿಂದ ಇವರೆಲ್ಲರೂ ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ ಇವರು ಯೆಹೋವನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂಮಿಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವುದರಿಂದ ಇವರೆಲ್ಲರೂ ಸಜೀವಿಗಳಾಗಿ ಸಮಾಧಿಯಾದರೆ, ಇವರು ನಿಜವಾಗಿಯೂ ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು. ಅಧ್ಯಾಯವನ್ನು ನೋಡಿ |