Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಮಹಾಯಾಜಕ ಆರೋನನ ಮಗ ಎಲ್ಲಾಜಾರನಿಗೆ ಆಜ್ಞಾಪಿಸು; ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಯಾಜಕ ಆರೋನನ ಮಗನಾದ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು. ಯಾಕೆಂದರೆ ಆ ಧೂಪಾರತಿಗಳು ಪವಿತ್ರವಾದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ಯಾಜಕನಾದ ಆರೋನನ ಮಗ ಎಲಿಯಾಜರನಿಗೆ, ಧೂಪದ ಪಾತ್ರೆಗಳು ಪರಿಶುದ್ಧವಾಗಿರುವುದರಿಂದ ಸುಟ್ಟುಹೋದವರ ಮಧ್ಯದಿಂದ ಅವನು ಅವುಗಳನ್ನು ಎತ್ತಬೇಕು. ಆ ಬೆಂಕಿಯನ್ನು ದೂರ ಚೆಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:37
5 ತಿಳಿವುಗಳ ಹೋಲಿಕೆ  

ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.


ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.


“‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.


ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ


ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು