ಅರಣ್ಯಕಾಂಡ 16:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು. ಅಧ್ಯಾಯವನ್ನು ನೋಡಿ |