Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:5
38 ತಿಳಿವುಗಳ ಹೋಲಿಕೆ  

ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.


ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.


“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.


ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.


ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.


ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.


ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.


“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.


“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,


ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.


ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,


ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?


ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.


ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.


ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು.


ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು