ಅರಣ್ಯಕಾಂಡ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಸರ್ವೇಶ್ವರ ಯಾರನ್ನು ಮೆಚ್ಚುತ್ತಾರೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ಅಧಿಕವಾಗಿರುವುದು ನಿಮ್ಮ ವರ್ತನೆಯೆ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳುಕೊಳ್ಳುವಿರಿ. ಲೇವಿಯರೇ, ನಿವ್ಮಿುಂದ ಸಾಕಾಯಿತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೋ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ, ಅವುಗಳ ಮೇಲೆ ಧೂಪವನ್ನು ಯೆಹೋವ ದೇವರ ಮುಂದೆ ಹಾಕಿರಿ. ಆಗ ಯೆಹೋವ ದೇವರು ಯಾವನನ್ನು ಆಯ್ದುಕೊಳ್ಳುವರೋ ಅವನೇ ಪರಿಶುದ್ಧನಾಗಿರುವನು. ಲೇವಿಯರೇ, ನೀವು ಬಹಳ ಮಿತಿಮೀರಿ ಹೋಗುತ್ತಿರುವಿರಿ,” ಎಂದನು. ಅಧ್ಯಾಯವನ್ನು ನೋಡಿ |