Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲರ ದೇವರು ತಮ್ಮ ಸಮೂದಾಯದವರಾದ ನಿಮ್ಮನ್ನು ಪ್ರತ್ಯೇಕಿಸಿ ತಮ್ಮ ಗುಡಾರದ ಪರಿಚರ್ಯವನ್ನು ಮಾಡಲು ಹಾಗೂ ಸರ್ವಸಮುದಾಯದ ಸೇವೆಯನ್ನು ಕೈಗೊಳ್ಳಲು ತಮ್ಮ ಬಳಿಯಲ್ಲೇ ಇಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್ಯರ ದೇವರು ಅವರ ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿ ತನ್ನ ಗುಡಾರದ ಪರಿಚರ್ಯವನ್ನು ಮಾಡಲೂ ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡಲೂ [ಕೋರಹನೇ,] ನಿನ್ನನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರ ದೇವರು ನಿಮ್ಮನ್ನು ಸರ್ವಸಮೂಹದಿಂದ ಆರಿಸಿಕೊಂಡದ್ದಕ್ಕಾಗಿ ನೀವು ಸಂತೋಷಪಡಬೇಕು. ದೇವರ ಪವಿತ್ರ ಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡುವುದಕ್ಕೂ ಇಸ್ರೇಲರ ಸೇವೆಯನ್ನು ಮಾಡುವುದಕ್ಕೂ ಮತ್ತು ಯಜ್ಞಗಳನ್ನು ಸಿದ್ಧಪಡಿಸುವುದರಲ್ಲಿ ಅವರಿಗೆ ಸಹಾಯಮಾಡುವುದಕ್ಕೂ ಯೆಹೋವನು ನಿಮ್ಮನ್ನು ತನ್ನ ಸಮೀಪಕ್ಕೆ ಬರಗೊಡಿಸಿದ್ದಾನೆ. ಅದು ನಿಮಗೆ ಸಾಕಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:9
20 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, “ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೆನಲ್ಲಾ” ಎಂದು ಉತ್ತರ ಕೊಟ್ಟನು.


ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?


“ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.


ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


(ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?


ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.


ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.


ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.


ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ.


ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.


“ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.


ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ,


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು