Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರು ಮೋಶೆಯ ಬಳಿಗೆ ಬಂದು, “ಇಗೋ ನಾವು ನಾಶವಾಗಲಿದ್ದೇವೆ, ನಶಿಸಿಹೋಗುತ್ತೇವೆ, ನಿಶ್ಯೇಷವಾಗಿ ನಿರ್ಮೂಲವಾಗುವ ಹಾಗೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸ್ರಾಯೇಲ್ಯರು ಮೋಶೆಯ ಬಳಿಗೆ ಬಂದು ಅವನಿಗೆ - ನಾವು ಪ್ರಾಣಕಳಕೊಳ್ಳುವವರಾದೆವಲ್ಲಾ; ಇಲ್ಲದೆ ಹೋಗುತ್ತೇವೆ; ನಾವು ನಿಶ್ಶೇಷವಾಗಿ ಇಲ್ಲದೆ ಹೋಗುವ ಹಾಗೆ ಕಾಣುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲರು ಮೋಶೆಗೆ, “ನಾವೆಲ್ಲರು ಪ್ರಾಣ ಕಳೆದುಕೊಂಡು ನಾಶವಾಗುತ್ತೇವಲ್ಲಾ, ನಮ್ಮಲ್ಲಿ ಯಾರೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಇಸ್ರಾಯೇಲರು ಮೋಶೆಯ ಸಂಗಡ ಮಾತನಾಡಿ, “ನಾವೆಲ್ಲರೂ ಸಾಯುತ್ತೇವೆ, ನಾಶವಾಗುತ್ತೇವೆ. ನಾವೆಲ್ಲರೂ ನಾಶವಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:12
8 ತಿಳಿವುಗಳ ಹೋಲಿಕೆ  

ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”


ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.


ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.


ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.


ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.


ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು