ಅರಣ್ಯಕಾಂಡ 17:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾರನೆಯ ದಿನ ಮೋಶೆ ಗುಡಾರದೊಳಗೆ ಹೋಗಿ ನೋಡಿದನು. ಏನಾಶ್ಚರ್ಯ! ಲೇವಿಕುಲದ ಪರವಾಗಿ ಆರೋನನು ಕೊಟ್ಟಿದ್ದ ಕೋಲು ಚಿಗುರಿತ್ತು; ಮೊಗ್ಗುಗಳು ಬಿಟ್ಟು, ಹೂವರಳಿ, ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮರುದಿನ ಮೋಶೆ ಗುಡಾರದಲ್ಲಿ ಹೋಗಿ ನೋಡಲಾಗಿ ಆಹಾ, ಲೇವಿಕುಲಕ್ಕೋಸ್ಕರ ಆರೋನನು ಕೊಟ್ಟಿದ್ದ ಕೋಲು ಚಿಗುರಿ ಮೊಗ್ಗೆ ಬಿಟ್ಟು ಹೂವರಳಿ ಬಾದಾವಿು ಹಣ್ಣುಗಳನ್ನು ಫಲಿಸಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ಅಧ್ಯಾಯವನ್ನು ನೋಡಿ |