Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಇದಲ್ಲದೆ ಇಸ್ರಯೇಲರು ನನಗೆ ಮೀಸಲಾಗಿಟ್ಟು ಅರ್ಪಿಸುವ ದ್ರವ್ಯಗಳು, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸಲ್ಲಬೇಕು. ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿ ಶುದ್ಧರಾದವರೆಲ್ಲರೂ ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಲ್ಲದೆ ಇಸ್ರಾಯೇಲ್ಯರು [ಮಾಡುವ ಸಮಾಧಾನಯಜ್ಞದ್ರವ್ಯಗಳಿಂದ] ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಆಗಬೇಕು; ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ನಿಯಮದಿಂದ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಅದಲ್ಲದೆ, ಅವರ ಪ್ರತಿಷ್ಠಿತಾ ಕಾಣಿಕೆಗಳು ಮತ್ತು ಇಸ್ರೇಲರ ನಿವಾಳಿಸಲ್ಪಟ್ಟ ಕಾಣಿಕೆಗಳು ನಿಮಗೆ ಸೇರಿವೆ. ಅವುಗಳನ್ನು ನಾನು ನಿನಗೂ ನಿನ್ನ ಗಂಡುಮಕ್ಕಳಿಗೂ ಹೆಣ್ಣುಮಕ್ಕಳಿಗೂ ಶಾಶ್ವತವಾದ ಪಾಲಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:11
10 ತಿಳಿವುಗಳ ಹೋಲಿಕೆ  

ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.


ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.


ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.


ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.


ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.


ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.


ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು