Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗಲೆ ಗೊತ್ತಾದ ಈಡನ್ನು ಅಂದರೆ ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗಲೇ ನೀವು ಗೊತ್ತಾದ ಈಡನ್ನು ಅಂದರೆ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಐದು ರೂಪಾಯಿಯನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಂದು ತಿಂಗಳಿನ ಪ್ರಾಯಕ್ಕೆ ಬಂದಿರುವ ಎಲ್ಲರಿಂದಲೂ ನಿಗದಿಪಡಿಸಿದ ಐದು ಶೆಕೆಲ್‌ಗಳನ್ನು ಈಡಾಗಿ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ಗೇರಾ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ವಿಮೋಚಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:16
9 ತಿಳಿವುಗಳ ಹೋಲಿಕೆ  

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.


ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.


ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.”


ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.


ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.


“ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.


ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


“ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು