ಅರಣ್ಯಕಾಂಡ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿನ್ನ ತಂದೆಯ ಕುಲದವರೂ ನಿನ್ನ ರಕ್ತಸಂಬಂಧಿಗಳೂ ಆಗಿರುವ ಲೇವಿಕುಲದವರನ್ನು ನಿನ್ನೊಡನೆ ಸೇರಿಸಿಕೊ; ನೀನು ಮತ್ತು ನಿನ್ನ ಗಂಡುಮಕ್ಕಳು ಒಡಂಬಡಿಕೆಯ ಮುಂದೆ ಇರುವಾಗ ಅವರು ನಿನ್ನೊಂದಿಗಿದ್ದು ನಿನಗೆ ಸಹಾಯ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು. ಅಧ್ಯಾಯವನ್ನು ನೋಡಿ |