Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ ಸರ್ವೇಶ್ವರ ಆರೋನನಿಗೆ ಹೀಗೆಂದರು: “ಇಸ್ರಯೇಲರ ನಾಡಿನಲ್ಲಿ ನಿನ್ನ ಸ್ವಂತ ಸೊತ್ತಾಗಿ ಯಾವ ಆಸ್ತಿಯೂ ಇರುವುದಿಲ್ಲ; ಅವರೊಂದಿಗೆ ನಿನಗೆ ಯಾವ ಪಾಲೂ ಇರುವುದಿಲ್ಲ. ಇಸ್ರಯೇಲರ ನಡುವೆ ನಾನೇ ನಿನಗೆ ಆಸ್ತಿಪಾಸ್ತಿ, ಪಾಲುಪಸುಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರ ದೇಶದಲ್ಲಿ ನಿನಗೆ ಸ್ವಂತಕ್ಕಾಗಿ ಭೂಸ್ಥಿತಿ ಆಗುವದಿಲ್ಲ; ಅವರೊಂದಿಗೆ ನಿನಗೆ ಪಾಲು ಇರುವದಿಲ್ಲ. ಇಸ್ರಾಯೇಲ್ಯರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಸ್ವಾಸ್ತ್ಯವಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ಆರೋನನಿಗೆ, “ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು, ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು. ನಾನೇ ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಪಾಲೂ ನಿನ್ನ ಸ್ವಾಸ್ತ್ಯವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:20
20 ತಿಳಿವುಗಳ ಹೋಲಿಕೆ  

“ಅವರಿಗೆ ಇದು ಸ್ವಾಸ್ತ್ಯವಾಗುವುದು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ.


ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.


ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು.


“ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.


ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.


ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು.


ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.


ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.


ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.


ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.


ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.


ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು