Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇನ್ನು ಮುಂದೆ ಇಸ್ರಯೇಲರು ಪಾಪಮಾಡಿ ಸಾವಿಗೆ ತುತ್ತಾಗದಂತೆ ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇನ್ನು ಮುಂದೆ ಇಸ್ರಾಯೇಲ್ಯರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು; ಬಂದರೆ ಅವರು ಆ ದೋಷದಿಂದ ಸತ್ತುಹೋದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗಿನಿಂದ ಇಸ್ರೇಲರು ದೇವದರ್ಶನಗುಡಾರದೊಳಗೆ ಅತಿಕ್ರಮಿಸಿ ಬರಕೂಡದು; ಬಂದರೆ ತಮ್ಮ ಮೇಲೆ ದಂಡನೆಯನ್ನು ಬರಮಾಡಿಕೊಂಡು ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:22
7 ತಿಳಿವುಗಳ ಹೋಲಿಕೆ  

ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.


ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.


ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.


ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು