ಅರಣ್ಯಕಾಂಡ 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು. ಅಧ್ಯಾಯವನ್ನು ನೋಡಿ |