ಅರಣ್ಯಕಾಂಡ 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’” ಎಂದು ಹೇಳಿದ ಮಾತಿಗೆ ಇದೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಹತ್ತನೆಯ ಪಾಲನ್ನು ಅವರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದಲೇ ಇತರ ಇಸ್ರಯೇಲರಿಗೆ ಪಾಲು ದೊರಕುವಂತೆ ಅವರಿಗೆ ಪಾಲು ದೊರಕುವುದಿಲ್ಲವೆಂದು ಒತ್ತಿಹೇಳಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನೇ ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನಲ್ಲಾ. ಇವರಿಗೆ ಇಸ್ರಾಯೇಲ್ಯರೊಂದಿಗೆ ಪಾಲು ದೊರೆಯುವದಿಲ್ಲವೆಂದು ನಾನು ಹೇಳಿದ ಮಾತಿಗೆ ಇದೇ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇಸ್ರೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನು ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಇವರಿಗೆ ಇಸ್ರೇಲರೊಂದಿಗೆ ಪಾಲು ದೊರೆಯುವುದಿಲ್ಲವೆಂದು ನಾನು ಲೇವಿಯರ ಕುರಿತು ಹೇಳಿದ ಮಾತಿಗೆ ಇದೇ ಕಾರಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು. ಅಧ್ಯಾಯವನ್ನು ನೋಡಿ |