Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗೆ ನೀವು ಸಮರ್ಪಿಸುವ ಹತ್ತನೆಯ ಪಾಲು, ಕಣದಲ್ಲಿನ ದವಸದಿಂದ ಹಾಗೂ ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಾಂಶವೆಂದು ಪರಿಗಣಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನೂ ದ್ರಾಕ್ಷೇತೊಟ್ಟಿಯ ರಸವನ್ನೂ ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನೂ ದ್ರಾಕ್ಷಿಆಲೆಯಿಂದ ರಸವನ್ನೂ ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈ ನಿಮ್ಮ ಸಮರ್ಪಣೆಯನ್ನು ಕಣದ ಧಾನ್ಯದ ಹಾಗೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:27
9 ತಿಳಿವುಗಳ ಹೋಲಿಕೆ  

ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.


ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,


ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.


ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.


“ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.


ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು