Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿಮಗೆ ಕೊಡಲಾಗುವ ಸಕಲ ಪದಾರ್ಥಗಳಲ್ಲಿ ಉತ್ತಮ ಭಾಗವನ್ನೇ, ಅಂದರೆ ದೇವರ ವಸ್ತುವಾಗುವುದಕ್ಕೆ ಯೋಗ್ಯವಾದ ಭಾಗವನ್ನೇ ಸರ್ವೇಶ್ವರನಿಗೆ ಮೀಸಲಾಗಿಟ್ಟು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿಮಗೆ ಕೊಡಲ್ಪಡುವ ಸಕಲಪದಾರ್ಥಗಳಲ್ಲಿಯೂ ನೀವು ಉತ್ತಮಭಾಗವನ್ನೇ ಅಂದರೆ ದೇವರ ವಸ್ತುವಾಗುವದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇಸ್ರೇಲರು ನಿಮಗೆ ಕೊಡುವ ಸಕಲ ಪದಾರ್ಥಗಳಿಂದ ನೀವು ಯೆಹೋವನಿಗೆ ಕೊಡಬೇಕಾಗಿರುವ ಪಾಲನ್ನು ಮತ್ತು ಪ್ರತಿಷ್ಠಿಸಲ್ಪಟ್ಟಿರುವ ಉತ್ತಮ ಭಾಗವನ್ನು ನೀವು ಪ್ರತ್ಯೇಕವಾಗಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಅದರ ಒಂದೊಂದರ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಯೆಹೋವ ದೇವರಿಗೆ ಸಮರ್ಪಣೆಯಾಗಿ ಅರ್ಪಿಸಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:29
4 ತಿಳಿವುಗಳ ಹೋಲಿಕೆ  

ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.


ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.


ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.


ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು