ಅರಣ್ಯಕಾಂಡ 18:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಸ್ರಯೇಲರಲ್ಲಿ ನಿನ್ನ ಕುಲದವರಾದ ಲೇವಿಯರನ್ನು ನಾನೇ ಆರಿಸಿಕೊಂಡಿದ್ದೇನೆ. ಅವರು ಸರ್ವೇಶ್ವರನಿಗೆ ಸಮರ್ಪಿತವಾಗಿ ಕಾಣಿಕೆಯಂತೆ ನಿನ್ನ ವಶದಲ್ಲೇ ಇದ್ದಾರೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಅವರೇ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಗೋ ನಾನು ಇಸ್ರಾಯೇಲ್ಯರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ತೆಗೆದುಕೊಂಡಿದ್ದೇನೆ; ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ; ಅವರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಎಲ್ಲಾ ಇಸ್ರೇಲರಿಂದ ನಾನೇ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನಿನಗೆ ಕೊಡಲ್ಪಟ್ಟ ಬಹುಮಾನವಾಗಿದ್ದಾರೆ. ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಲು ಅವರು ಯೆಹೋವನಿಗೆ ಪ್ರತಿಷ್ಠಿತರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ. ಅಧ್ಯಾಯವನ್ನು ನೋಡಿ |