Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನಂದರೆ - ಇಸ್ರಾಯೇಲ್ಯರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಅಂದರೆ ದೇವರ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವದಕ್ಕೆ ದಾನಮಾಡಿದ್ದೇನೆ; ಅವು ಸದಾಕಾಲವೂ ನಿಮಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಮಾತನಾಡಿ ಆರೋನನಿಗೆ, “ನನಗೆ ಕೊಡುವ ಎಲ್ಲಾ ಕಾಣಿಕೆಗಳ ಮೇಲೆ ನಿನ್ನನ್ನು ನೇಮಿಸಿದ್ದೇನೆ. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಪರಿಶುದ್ಧವಾದ ಕಾಣಿಕೆಗಳನ್ನೆಲ್ಲಾ ನಿನಗೂ ನಿನ್ನ ಮಕ್ಕಳಿಗೂ ಶಾಶ್ವತ ಪಾಲನ್ನು ನೀಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:8
32 ತಿಳಿವುಗಳ ಹೋಲಿಕೆ  

ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.


ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.


ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.


ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.


ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.


ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.


ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.


ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.


ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.


“‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.


ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.


ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.


“ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.


ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.


ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.


ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.


ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.


ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.


ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.


ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು