ಅರಣ್ಯಕಾಂಡ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸಂಜೆಯವರೆಗೆ ಮಡಿಗೆಟ್ಟವನಾಗಿರಬೇಕು. ಇದು ಇಸ್ರಯೇಲರಿಗೂ ಅವರ ಮಧ್ಯೆ ವಾಸಿಸುವ ಇತರರಿಗೂ ಅನ್ವಯಿಸುವ ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲ್ಯರಿಗೂ ಅವರಲ್ಲಿ ಇಳುಕೊಂಡಿರುವ ಇತರರಿಗೂ ಶಾಶ್ವತನಿಯಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. “ಇದು ಇಸ್ರೇಲರಿಗೂ ಅವರ ಮಧ್ಯದಲ್ಲಿ ಇಳಿದುಕೊಂಡಿರುವ ಪರದೇಶಸ್ಥರಿಗೂ ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು, ಸಂಜೆಯವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಶಾಶ್ವತ ಕಟ್ಟಳೆಯಾಗಿದೆ. ಅಧ್ಯಾಯವನ್ನು ನೋಡಿ |