Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೂರನೇ ದಿನ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನ ಶುದ್ಧನಾಗುವನು. ಮೂರನೆಯ ದಿನ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆ ದಿನದಲ್ಲೂ ಶುದ್ಧನಾಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಶುದ್ಧೀಕರಣದ ನೀರಿನಿಂದ ಮೂರನೆಯ ದಿನದಲ್ಲಿ ಮತ್ತು ತಿರುಗಿ ಏಳನೆಯ ದಿನದಲ್ಲಿ ತನ್ನನ್ನು ಶುದ್ಧೀಕರಿಸಿಕೊಳ್ಳಬೇಕು. ಆಗ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಇದರಿಂದ ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿಕೊಂಡು ಏಳನೆಯ ದಿವಸದಲ್ಲಿ ಶುದ್ಧನಾಗಬೇಕು. ಆದರೆ ಅವನು ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧಮಾಡಿಕೊಳ್ಳದಿದ್ದರೆ, ಏಳನೆಯ ದಿವಸದಲ್ಲಿ ಶುದ್ಧನಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:12
12 ತಿಳಿವುಗಳ ಹೋಲಿಕೆ  

ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.


ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.


ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು