ಅರಣ್ಯಕಾಂಡ 19:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಅವನು ಸರ್ವೇಶ್ವರನ ಗುಡಾರವನ್ನು ಅಪವಿತ್ರಪಡಿಸುತ್ತಾನೆ. ಅಂಥವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣ ನೀರನ್ನು ಅವನ ಮೇಲೆ ಚಿಮುಕಿಸದೆ ಇರುವ ಕಾರಣ ಅವನು ಮಡಿಗೆಟ್ಟವನು; ಅವನಿಗುಂಟಾದ ಮೈಲಿಗೆ ಅವನಲ್ಲಿ ಉಳಿದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವವನಾದನು. ಅಂಥವನನ್ನು ಇಸ್ರಾಯೇಲ್ಯರಿಂದ ತೆಗೆದುಹಾಕಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಇರುವದರಿಂದ ಅವನು ಅಶುದ್ಧನು; ಅವನಿಗುಂಟಾದ ಅಪವಿತ್ರತೆಯು ಇದ್ದೇ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಒಬ್ಬನು ಮನುಷ್ಯನ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸತ್ತ ಮನುಷ್ಯನ ಶವವನ್ನು ಮುಟ್ಟಿ, ಶುದ್ಧಮಾಡಿಕೊಳ್ಳದವನು ಯೆಹೋವ ದೇವರ ಗುಡಾರವನ್ನು ಅಪವಿತ್ರಪಡಿಸುತ್ತಾನೆ, ಅಂಥವನನ್ನು ಇಸ್ರಾಯೇಲಿನವರೊಳಗಿಂದ ತೆಗೆದುಹಾಕಬೇಕು, ಶುದ್ಧೀಕರಣದ ನೀರು ಅವನ ಮೇಲೆ ಚಿಮುಕಿಸದ ಕಾರಣ ಅವನು ಅಶುದ್ಧನಾಗಿದ್ದಾನೆ. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು. ಅಧ್ಯಾಯವನ್ನು ನೋಡಿ |