ಅರಣ್ಯಕಾಂಡ 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಮೈಲಿಗೆ ನಿಯಮವಿದು: ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯೊಳಗಿರುವವರೆಲ್ಲರು ಹಾಗು ಅದರೊಳಗೆ ಬರುವವರು ಕೂಡ ಮೈಲಿಗೆಯಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 [ಹೊಲೆಗಳೆವ] ಕಟ್ಟಳೆ ಹೇಗಂದರೆ - ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯಲ್ಲಿರುವವರೆಲ್ಲರೂ ಅದರೊಳಗೆ ಬರುವವರೂ ಏಳು ದಿನಗಳವರೆಗೆ ಅಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿ |