ಅರಣ್ಯಕಾಂಡ 19:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮಡಿಗೆಟ್ಟು ದೋಷಪರಿಹಾರ ಮಾಡಿಕೊಳ್ಳದವನು ಸರ್ವೇಶ್ವರನ ದೇವಸ್ಥಾನವನ್ನು ಅಪವಿತ್ರಗೊಳಿಸುತ್ತಾನೆ. ಆದಕಾರಣ ಅಂಥವನಿಗೆ ಸಭೆಯಿಂದ ಬಹಿಷ್ಕಾರ ಹಾಕಬೇಕು. ಶುದ್ಧೀಕರಣ ಜಲವನ್ನು ತನ್ನ ಮೇಲೆ ಚಿಮುಕಿಸಿಕೊಳ್ಳದೆ ಹೋದುದರಿಂದ ಅವನು ಮಡಿಗೆಟ್ಟವನಾಗಿಯೇ ಇರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಶುದ್ಧನಾಗಿ ದೋಷಪರಿಹಾರಮಾಡಿಕೊಳ್ಳದವನು ಯೆಹೋವನ ದೇವಸ್ಥಾನವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಅಶುದ್ಧನಾಗಿದ್ದರೂ ತನ್ನನ್ನು ಶುದ್ಧಮಾಡಿಕೊಳ್ಳದವನು ಯೆಹೋವನ ಗುಡಾರವನ್ನು ಅಶುದ್ಧಮಾಡಿದವನಾಗಿರುತ್ತಾನೆ. ಆದ್ದರಿಂದ ಅವನನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧಪಡಿಸಿಕೊಳ್ಳುವ ನೀರನ್ನು ಚಿಮಿಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಅಪವಿತ್ರನಾಗಿದ್ದು, ತನ್ನನ್ನು ಶುದ್ಧಪಡಿಸಿಕೊಳ್ಳದವನು ಸಭೆಯ ಮಧ್ಯದಿಂದ ತೆಗೆದುಹಾಕಬೇಕು ಏಕೆಂದರೆ ಅವನು ಯೆಹೋವ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ. ನೀರು ಅವನ ಮೇಲೆ ಚಿಮಿಕಿಸಿಕೊಳ್ಳದ ಕಾರಣ ಅವನು ಅಪವಿತ್ರನೇ. ಅಧ್ಯಾಯವನ್ನು ನೋಡಿ |