ಅರಣ್ಯಕಾಂಡ 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಯೇಲ್ ಸಮಾಜದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಅದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತು ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ಯರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನ ಮಾಡಬೇಕು. ಅದು ಹೊಲೆಗಳೆವ ನೀರನ್ನು ಸಿದ್ಧಪಡಿಸುವದಕ್ಕಾಗಿ ಅಲ್ಲೇ ಇಟ್ಟಿರಬೇಕು; ಅದು ದೋಷಪರಿಹಾರಕವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಆಗ ಶುದ್ಧನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಇಸ್ರೇಲರ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಆ ಬೂದಿಯನ್ನು ಉಪಯೋಗಿಸಬೇಕು. ಅದು ದೋಷಪರಿಹಾರಕವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು. ಅಧ್ಯಾಯವನ್ನು ನೋಡಿ |