Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೊದಲನೆಯ ತಿಂಗಳಲ್ಲಿ ಇಸ್ರಾಯೇಲ್ಯರ ಸರ್ವಸಮೂಹದವರು ಚಿನ್ ಎಂಬ ಅರಣ್ಯಕ್ಕೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ವಿುರ್ಯಾಮಳು ತೀರಿಹೋದಳು; ಆಕೆಯ ಶವವನ್ನು ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:1
23 ತಿಳಿವುಗಳ ಹೋಲಿಕೆ  

ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.


ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.


ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.


ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.


ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.


ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.


ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.


ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.


ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.


ಆಗಲೇ ಮಗುವಿನ ಅಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು.


ಕೂಸಿಗೆ ಏನಾಗುವುದೆಂದು ತಿಳಿದುಕೊಳ್ಳುವುದಕ್ಕೆ, ಆ ಕೂಸಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.


ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.


ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.


ಆ ಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ ಎಂದು ಹೇಳಿದನು.


ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ, ಕೆಂಪು ಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.


ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.


ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.


ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು