Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆರೋನನ ಜೊತೆಯಲ್ಲಿ ಜನಸಮೂಹದವರ ಬಳಿಗೆ ಹೋಗಿ ಕಡಿದಾದ ಆ ಬಂಡೆಗೆದುರಾಗಿ ಅವರನ್ನು ಸಭೆಸೇರಿಸಿದನು. ಅವರನ್ನು ಸಂಬೋಧಿಸುತ್ತಾ, “ದಂಗೆಕಾರರೇ ಕೇಳಿ; ಈ ಬಂಡೆಯಿಂದ ನಿಮಗೆ ನಾವು ನೀರನ್ನು ಬರಮಾಡಬೇಕೋ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆರೋನನ ಜೊತೆಯಲ್ಲಿ ಸಮೂಹದವರನ್ನು ಆ ಕಡಿದಾದ ಬಂಡೆಗೆದುರಾಗಿ ಕೂಡಿಸಿ ಅವರಿಗೆ - ದ್ರೋಹಿಗಳೇ, ಕೇಳಿರಿ; ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನರು ಬಂಡೆಯ ಮುಂದೆ ಒಟ್ಟಾಗಿ ಸೇರಿಬರಬೇಕೆಂದು ಮೋಶೆ ಆರೋನರು ಹೇಳಿದರು. ಆಗ ಮೋಶೆ, “ದ್ರೋಹಿಗಳೇ, ಈಗ ನನಗೆ ಕಿವಿಗೊಡಿರಿ. ನಿಮಗೋಸ್ಕರವಾಗಿ ಈ ಬಂಡೆಯಿಂದ ನೀರು ಹರಿಯುವಂತೆ ನಾವು ಮಾಡಬೇಕೋ?” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೋಶೆಯೂ, ಆರೋನನೂ ಜನರನ್ನು ಬಂಡೆಯ ಮುಂದೆ ಕೂಡಿಸಿ, ಅವರಿಗೆ, “ತಿರುಗಿ ಬಿದ್ದವರೇ ಕೇಳಿರಿ, ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:10
18 ತಿಳಿವುಗಳ ಹೋಲಿಕೆ  

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.


ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.


ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.


ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.


ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.


ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು