ಅರಣ್ಯಕಾಂಡ 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೈಯೆತ್ತಿ ತನ್ನ ಕೈಯಲ್ಲಿರುವ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು; ಸಮೂಹದವರೂ ಅವರ ಪಶುಗಳೂ ಕುಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು. ಅಧ್ಯಾಯವನ್ನು ನೋಡಿ |