ಅರಣ್ಯಕಾಂಡ 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಯೆಹೋವನು ಮೋಶೆ ಆರೋನರಿಗೆ - ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲ್ಯರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆಹೋದದರಿಂದ ಈ ಸಮೂಹದವರನ್ನು ನಾನು ಅವರಿಗೆ ವಾಗ್ದಾನ ಮಾಡಿದ ದೇಶದೊಳಕ್ಕೆ ನೀವು ಕರಕೊಂಡು ಹೋಗಕೂಡದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಯೆಹೋವನು ಮೋಶೆ ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರೇಲರ ಎದುರಿನಲ್ಲಿ ನನ್ನ ಪವಿತ್ರತೆಯನ್ನು ತೋರಿಸದೆ ಹೋದದ್ದರಿಂದ ಈ ಸಮುದಾಯದವರಿಗೆ ಕೊಡಲಿರುವ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗುವುದಿಲ್ಲ.” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |