Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರು ಅಲ್ಲಿ ಸರ್ವೇಶ್ವರನ ಸಂಗಡ ವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ‘ಮೆರೀಬಾ’ ಎಂದು ಹೆಸರಾಯಿತು. ಅಲ್ಲಿ ಸರ್ವೇಶ್ವರ ತಮ್ಮ ಪರಮ ಪಾವನತೆಯನ್ನು ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರು ಅಲ್ಲಿ ಯೆಹೋವನ ಸಂಗಡ ವಿವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ಮೆರೀಬಾ ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಮಹಾಮಹಿಮೆಯನ್ನು ತೋರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲರು ಅಲ್ಲಿ ಯೆಹೋವನೊಡನೆ ವಾದ ಮಾಡಿದ್ದರಿಂದ ಆ ಸ್ಥಳವು “ಮೆರೀಬಾ ಬುಗ್ಗೆ” ಎಂದು ಕರೆಯಲ್ಪಟ್ಟಿತು. ಅದಲ್ಲದೆ ಯೆಹೋವನು ತಾನು ಪರಿಶುದ್ಧನು ಎಂಬುದನ್ನು ಅವರಿಗೆ ತೋರಿಸಿದ ಸ್ಥಳವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಸ್ರಾಯೇಲರು ಯೆಹೋವ ದೇವರ ಸಂಗಡ ವ್ಯಾಜ್ಯವಾಡಿದ್ದಕ್ಕಾಗಿ ದೇವರು ಅವರಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾ ಸ್ಥಳದ ನೀರು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:13
11 ತಿಳಿವುಗಳ ಹೋಲಿಕೆ  

ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.


ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.


ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು