Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಮ್ಮ ಪೂರ್ವಜರು ಈಜಿಪ್ಟ್ ದೇಶಕ್ಕೆ ಹೋದದ್ದು, ಅಲ್ಲಿ ನಾವು ಬಹು ದಿವಸ ವಾಸವಾಗಿದ್ದದ್ದು, ಈಜಿಪ್ಟಿನವರು ನಮ್ಮನ್ನೂ ನಮ್ಮ ಪೂರ್ವಜರನ್ನೂ ಹಿಂಸಿಸಿದ್ದು, ಇವೆಲ್ಲಾ ತಿಳಿದ ವಿಷಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಮ್ಮ ಪಿತೃಗಳು ಐಗುಪ್ತದೇಶಕ್ಕೆ ಇಳಿದು ಹೋದದ್ದೂ ನಾವು ಅಲ್ಲಿ ಬಹುದಿವಸ ವಾಸವಾಗಿದ್ದದ್ದೂ ಐಗುಪ್ತ್ಯರು ನಮ್ಮನ್ನೂ ನಮ್ಮ ಪಿತೃಗಳನ್ನೂ ಉಪದ್ರವಪಡಿಸಿದ್ದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:15
16 ತಿಳಿವುಗಳ ಹೋಲಿಕೆ  

ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.


ಇಸ್ರಾಯೇಲರು ಐಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು.


ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್‌ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು.


ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.


ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.


ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.


ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?


ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.


ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.


ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.


ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.


ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.


ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.


ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು